ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣದಲ್ಲಿ ಈಗ ED ಎಂಟ್ರಿ ಕೊಟ್ಟಿದೆ. ಬೆಂಗಳೂರು, ರಾಯಚೂರು, ಬಳ್ಳಾರಿ ಸೇರಿ 18 ಕಡೆ ಇಡಿ ದಾಳಿ ನಡೆಸಿದೆ. ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸ್ತಿದ್ದಾರೆ. ಬೆಂಗಳೂರಿನ ಬಿಇಎಲ್ ಬಳಿ ಇರುವ ನಾಗೇಂದ್ರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಎರಡು ಇನೋವಾ ಕಾರಿನಲ್ಲಿ ಬಂದಿರೋ ಆರು ಮಂದಿ ಅಧಿಕಾರಿಗಳು ಮಹತ್ವದ ದಾಖಲೆ ಕಲೆಹಾಕುತ್ತಿದ್ದಾರೆ.
ಇತ್ತ ಮಾಜಿ ಸಚಿವ ನಾಗೇಂದ್ರ ಅವರ ಬಳ್ಳಾರಿ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ಮಹತ್ವದ ದಾಖಲೆ ಕಲೆಹಾಕ್ತಿದ್ದಾರೆ. ರಾತ್ರಿಯೇ ಬಳ್ಳಾರಿಗೆ ಬಂದ ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನಾಗೇಂದ್ರ ಮನೆ ಮೇಲೆ ರೇಡ್ ಮಾಡಿ ಪರಿಶೀಲನೆ ನಡೆಸ್ತಿದ್ದಾರೆ. 3 ರಿಂದ 4 ಜನ ED ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸ್ತಿದ್ದಾರೆ. ಮಾಜಿ ಸಚಿವ ನಾಗೇಂದ್ರ ಆಪ್ತರ ಬಗ್ಗೆ ಮಾಹಿತಿ ಕಲೆಹಾಕ್ತಿದೆ.