ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಾಣವಾದ ಹಾಗೂ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಸಿದ್ಧಗೊಂಡಿದೆ.
ಜೂನ್ ಕೊನೆಯಲ್ಲೇ ಎಲ್ಲ ಕೆಲಸಗಳು ಮುಗಿದಿದ್ದು, ಮೇಲ್ಸೇತುವೆ ಉದ್ಘಾಟನೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಪ್ರಸ್ತಾವನೆ ಸಲ್ಲಿಸಿದ ಬಗ್ಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚವಾಣ್ ಮಾಹಿತಿ ನೀಡಿದ್ದಾರೆ.
3.36-ಕಿಮೀ ಉದ್ದದ ಈ ಫ್ಲೈಓವರ್ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭವಾಗುತ್ತದೆ. ಮೇಟ್ರೊ ಹಳದಿ ರೇಖೆಯ ಕೆಳಗೆ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ಸಾಗಿದೆ. ಸರ್ಕಾರ ಸೂಚನೆ ಕೊಟ್ಟರೆ ಉದ್ಘಾಟನೆಗೊಂಡು ಸಾರ್ವಜನಿಕರಿಗೆ ಮುಕ್ತವಾಗಲಿದೆ. ಅತ್ತ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಯುತ್ತಿದ್ದು, ಡಿಸೆಂಬರ್ ಮೊದಲ ವಾರದಲ್ಲಿ
ಮೆಟ್ರೋಗೆ ಚಾಲನೆ ಸಾಧ್ಯತೆ ಇದೆ.
ಈ ಮೇಲ್ಸೇತುವೆ ಒಟ್ಟು ಐದು ರ್ಯಾಂಪ್ಗಳನ್ನು ಹೊಂದಿದ್ದು, ಎರಡು ರ್ಯಾಂಪ್ಗಳ (ಡಿ ಮತ್ತು ಇ) ಕೆಲಸ ಇನ್ನೂ ನಡೆಯುತ್ತಿದೆ. ಅದು 2025 ರ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
ಒಟ್ಟಿನಲ್ಲಿ ಅಂದುಕೊಂಡಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮತಿ ನೀಡಿ ಡಬಲ್ ಡೆಕ್ಕರ್ ರಸ್ತೆ ಉದ್ಘಾಟನೆಗೊಂಡರೆ ಶೀಘ್ರದಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ವಾಹನ ಸಂಚಾರ ಸುಗಮವಾಗಲಿದೆ