ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆರೋಗ್ಯ ಬಿಗಡಾಯಿಸಿದ ಕಾರಣ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಅಪರ್ಣಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೊನೆಗೂ ಅಪರ್ಣಾ ಮತ್ತೆಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಅಪರ್ಣಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬನಶಂಕರಿಯಲ್ಲಿರುವ ಅಪರ್ಣಾ ನಿವಾಸದ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು.
ಪ್ರೀತಿಯ ಮಡದಿಯನ್ನು ನೆನೆದು ಅಪರ್ಣಾ ಪತಿ ನಾಗರಾಜ್ ವಸ್ತಾರೆ ಕಣ್ಣೀರಿಟ್ಟಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನಾನು ಅಪರ್ಣಾ ತುಂಬಾ ಖಾಸಗಿಯಾಗಿ ಬದುಕಿದವರು. ಅಷ್ಟೇ ಖಾಸಗಿಯಾಗಿ ನಾನು ಅವಳನ್ನ ಬಿಳ್ಕೊಡಲಿಕ್ಕೆ ಇಷ್ಟ ಪಡುತೀನಿ. ಆಗಂತ ನನಗೆ ಸೇರುಕ್ಕೆ ಮುಂಚೆನೇ ಹೆಚ್ಚಾಗಿ ಅಪರ್ಣಾ ಕರ್ನಾಟಕಕ್ಕೆ ಸೇರಿದವಳು. ಅಪರ್ಣಾ ಗೆ ಒಂದು ಆಶಯ ಇತ್ತು. ಸಾವಿನ ಬಳಿಕ ಮಾಧ್ಯಮಗಳ ಮುಂದೆ ಎಲ್ಲವನ್ನು ಹೇಳುವಂತೆ ತಿಳಿಸಿದ್ದರು.
ಎರಡು ವರ್ಷದ ಹಿಂದೆ ಜುಲೈನಲ್ಲಿ ಶಾಸ್ವಕೋಶ ಕ್ಯಾನ್ಸರ್ ಅಂತಾ ಗೊತ್ತಾಯ್ತು. ಮೊದಲು ನೋಡಿದ ವೈದ್ಯರು ಆರು ತಿಂಗಳು ಬದುಕಬಹುದು ಅಂತಾ ಹೇಳಿದ್ದರು. ಅವಳು ಛಲಗಾತಿ ನಾನು ಬದುಕ್ತೀನಿ ಅಂತಾ ಇದ್ಲು, ಅಲ್ಲಿಂದ ಜನವರಿವರೆಗೂ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡಿದ್ದಳು. ಫೆಬ್ರವರಿಯಿಂದ ಸೋತಿದ್ದಳು, ಒಂದೂವರೇ ವರ್ಷದಿಂದ ಛಲದಿಂದ ಬದುಕಿದ್ದಳು. ಅವಳು ದೀರೆ, ಇಷ್ಟು ದಿನ ಬದುಕಿದ್ದಾಳೆ. ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಇಬ್ಬರು ಜಂಟಿಯಾಗಿ ಸೋತಿದೀವಿ ಎಂದು ಭಾವುಕರಾದರು.
ಇಂದು ಬೆಳಗ್ಗೆ 7:30 ಗಂಟೆ ಕರೆದುಕೊಂಡು ಬರುತ್ತೇನೆ, ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 12 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ. ಬನಶಂಕರಿ ಎರಡನೇ ಹಂತದಲ್ಲಿರೋ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.