ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯ ವಿರುದ್ಧ ಹೋರಾಡುತ್ತಿದ್ದ ನಟಿ ಅಪರ್ಣಾ ನಿಧನರಾಗಿದ್ದಾರೆ. ಅಪರ್ಣಾ ಜೊತೆಗೆ ಹಲವು ವರ್ಷಗಳಿಂದ ಉತ್ತಮ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ ಅವರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ. ಸದ್ಯ ಅಪರ್ಣಾ ನಿಧನಕ್ಕೆ ಕೋಟ್ಯಾಂತರ ಕನ್ನಡಿಗರು ಕಂಬನಿ ಮಿಡಿದಿದ್ದಾರೆ.