ರಾಮನಗರ: ಜಿಲ್ಲೆಯ ಹೆಸರು ಮರುನಾಮಕರಣ ವಿಚಾರಕ್ಕೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್ ಮಂಜುನಾಥ್ (Dr CN Manjunath) ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಬದಲಿಸದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.
ರಾಮನಗರಕ್ಕೆ (Ramanagara) ಭಾವನಾತ್ಮಕ, ಐತಿಹಾಸಿಕ ಹಿನ್ನೆಲೆಯಿದೆ.
ಅಭಿವೃದ್ಧಿ ಮಾಡಬೇಕಾದರೆ ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರ್ಯಾಂಡ್ ರಾಮನಗರವನ್ನಾಗಿ ಮಾಡಿ. ಹಾಗಿದ್ದಾಗ ಮಾತ್ರ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.https://ainlivenews.com/valmiki-multi-crore-scam-ed-has-officially-arrested-former-minister-nagendra/
ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದೆ. ಇಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ದುಸ್ತರವಾಗಿದೆ. ಈ ಪರಿಸ್ಥಿತಿಯಲ್ಲಿ ಸುಂದರವಾಗಿ ಬೆಳೆಯುತ್ತಿರುವ ರಾಮನಗರವನ್ನು ನಗರ ಪ್ರದೇಶಕ್ಕೆ ಸೇರ್ಪಡೆ ಮಾಡುವ ನಿರ್ಧಾರ ಅವೈಜ್ಞಾನಿಕ ಎಂದಿದ್ದಾರೆ.