ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರೀ ಭೂಕಂಪ ಸಂಭವಿದೆ. ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲಾಗಿದ್ದು, ಭೂಮಿ ಕಂಪಿಸಿದ ಅನುಭವವಾಗುತ್ತಲೇ ಭಯಭೀತರಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಬಾರಾಮುಲ್ಲಾ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ 12.26ರ ಸುಮಾರಿಗೆ ಭೂಮಿ ಕಂಪಿಸಿದೆ.
ಜನರ ಮನೆಗಳಲ್ಲಿರುವ ಫ್ಯಾನ್ ಹಾಗೂ ಮೇಜುಗಳು ಅಲುಗಾಡಿದ ಕಾರಣ ಜನ ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ.ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲ ತಿಂಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ ಸೇರಿ ಹಲವೆಡೆ ಭೂಕಂಪ ಸಂಭವಿಸಿತ್ತು.