ಹುಬ್ಬಳ್ಳಿ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಬೆಂಬಲದಿಂದ ಕರ್ನಾಟಕದಲ್ಲಿ ಬಹದೊಡ್ಡ ಹಗರಣ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರು ಸಂಸದ ರಾಹುಲ್ ಗಾಂಧಿಯವರ ಬೆಂಬಲದಿಂದ ಬಹುದೊಡ್ಡ ಭ್ರಷ್ಟಾಚಾರ ನಡೆಸಿದೆ. ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ ಎಂದು ದೂರಿದರು.
ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ಕೋಟಿ ಕೋಟಿ ಹಣ ಸಂಗ್ರಹ ಮಾಡಿದ್ದರು. ಈ ಬಗ್ಗೆ ನಾನು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದೆ. ಇಂದು ವಾಲ್ಮೀಕಿ ಅಭವೃದ್ದಿ ನಿಗಮದ ಭ್ರಷ್ಟಾಚಾರದಲ್ಲಿ ನೂರಾರು ಜನರಿಗೆ ಹಣ ವರ್ಗಾವಣೆ ಮಾಡಿದ್ದಾರೆ. ಇದು ಸಂಪೂರ್ಣವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಗೊತ್ತಿದ್ದೇ ನಡೆದಿರುವ ಭ್ರಷ್ಟಾಚಾರ. ಇದು 100 % ಭ್ರಷ್ಟಾಚಾರ ಸರ್ಕಾರ ಎಂದು ಕಿಡಿಕಾರಿದ್ದಾರೆೆ
ಇನ್ನೂ ಮುಡಾ ಬಹುಕೋಟಿ ಹಗರಣ ವಿಚಾರ ಕುರಿತು ಮಾತನಾಡಿ, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಮುಡಾ ಭೂಸ್ವಾಧೀನ ಮಾಡಿದ ಬಳಿಕ ಜಾಗದ ಮಾಲೀಕರಿಗೆ 50:50 ಅನುಪಾತದಲ್ಲಿ ಸೈಟ್ ಹಂಚುತ್ತಾರೆ. ಅದೇ ರೀತಿ ಸಿಎಂ ಕೂಡ ಸೈಟ್ ಪಡೆದಿದ್ದಾರೆ. ಇಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಎಂದು ಹೇಳಿದರು.