ಚುನಾವಣಾ ಪ್ರಚಾರದ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿ ಗುಂಡಿನ ದಾಳಿ ನಡೆದಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟ್ರಂಪ್ ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ ಹೊರ ಹಾಕಿದ್ದಾರೆ.
ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಳವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಯತ್ನ ನಡೆದಿದ್ದು. ಟ್ರಂಪ್ ಅವರ ಚುನಾವಣಾ ರ್ಯಾಲಿಯ ವೇಳೆ ಗುಂಡಿನ ದಾಳಿ ನಡೆದಿದ್ದು ಘಟನೆಯಿಂದ ಟ್ರಂಫ್ ಮುಖವೆಲ್ಲ ರಕ್ತ ಸಿಕ್ತವಾಗಿದೆ. ಪ್ರತಿಯಾಗಿ ಪೊಲೀಸರು ನಡೆಸಿದ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ ಟ್ರಂಪ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಘಟನೆಯಿಂದ ಅಮೆರಿಕ ಬೆಚ್ಚಿಬಿದ್ದಿದೆ.
ಗುಂಡಿನ ದಾಳಿಯ ಬಳಿಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್ ಅವರ ವಕ್ತಾರರು, ಅವರು ಆರೋಗ್ಯವಾಗಿದ್ದಾರೆ ಮತ್ತು ಸ್ಥಳೀಯ ವೈದ್ಯಕೀಯ ತಂಡದಿಂದ ಚಿಕಿತ್ಸೆಯನ್ನು ಮುಂದುವರಿಯುತ್ತಿದೆ ಎಂದು ತಿಳಿಸಿದ್ದಾರೆ. ಅವರ ವಕ್ತಾರ ಸ್ಟೀವನ್ ಚೆಯುಂಗ್, ಶೂಟಿಂಗ್ ಸಮಯದಲ್ಲಿ ಅವರ ತ್ವರಿತವಾಗಿ ರಿಯಾಕ್ಟ್ ಮಾಡಿದಕ್ಕೆ ಟ್ರಂಪ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಸಿಎನ್ಎನ್ ವರದಿಯ ಪ್ರಕಾರ, ಟ್ರಂಪ್ ಪರ ಪ್ರಚಾರ ಮಾಡುವಾಗ ದಾಳಿಕೋರನನ್ನು ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ.