ಕಾಪಿರೈಟ್ ಉಲ್ಲಂಘನೆ ಆರೋಪದಡಿ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ನಟ ರಕ್ಷಿತ್ ಶೆಟ್ಟಿ ಟೀಂ ಈ ವಿಚಾರವಾಗಿ ನಮಗೆ ಈವರೆಗೂ ಯಾವುದೇ ನೋಟಿಸ್ ಬಂದಿಲ್ಲ ಎಂದಿದ್ದಾರೆ.
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಈಗ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲು ಆಗಿದೆ. ಈ ವಿಚಾರಕ್ಕೆ ಪರಮ್ವಾ ಸ್ಟುಡಿಯೋಸ್ ಪ್ರತಿಕ್ರಿಯಿಸಿ, ನಮಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ. ಹಾಗಾಗಿ ನೋಟಿಸ್ ಬಂದ ನಂತರ ಉತ್ತರಿಸುತ್ತೇವೆ ಎಂದು ತಿಳಿಸಿದೆ.
ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಲಾಗಿದೆ.