‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಎಂಡ್ ಟೀಂ ಕಾಪಿರೈಟ್ ಉಲ್ಲಂಘನೆ ಮಾಡಿದ್ದಾರೆ ಎಂದು ಯಶವಂತಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸಂಬಂಧಿಸಿದವರಿಗೆ ನೋಟಿಸ್ ನೀಡಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್ ತಿಳಿಸಿದ್ದಾರೆ.
ಕಾಪಿರೈಟ್ ಅಡಿಯಲ್ಲಿ ಎಂಆರ್ಟಿ ಮ್ಯೂಸಿಕ್ ಮಾಲೀಕ ನವೀನ್ ಕುಮಾರ್ ದೂರು ದಾಖಲಿಸಿದ್ದಾರೆ. `ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಎರಡು ಹಾಡುಗಳನ್ನ ಅನುಮತಿ ಇಲ್ಲದೆ ಬಳಸಿದ್ದಾರೆ. ಇದರಲ್ಲಿ ಆರೋಪಿಯಾಗಿರುವವರು ಮೂವಿ ಸ್ಟುಡಿಯೋ ಮತ್ತು ಸಂಬಂಧಪಟ್ಟ ನಿರ್ಮಾಪಕರಿಗೆ ನೋಟಿಸ್ ನೀಡಿದ್ದೇವೆ ಎಂದು ಡಿಸಿಪಿ ಸೈದುಲು ಅದಾವತ್ ತಿಳಿಸಿದ್ದಾರೆ.
ಚಿತ್ರದ ಎರಡು ಟ್ಯೂನ್ ಬಳಕೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಇವತ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಿನಿಮಾ ಸಂಬಂಧ ಬೇರೆ ರಾಜ್ಯದಲ್ಲಿ ಇದ್ದಾರೆ. ಅವರು ಬೆಂಗಳೂರಿಗೆ ಬಂದ ನಂತರ ಹಾಜರಾಗುತ್ತೇವೆ ಎಂದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.