ರಾಜ್ಯ ಸರ್ಕಾರಿ ನೌಕರರ ಹಲವು ಬೇಡಿಕೆಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿ, 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಿ, ಅದರಂತೆ ವೇತನ ನೀಡುವುದಾಗಿತ್ತು. ಇವುಗಳಲ್ಲಿ 7ನೇ ವೇತನ ಆಯೋಗ ಜಾರಿಯ ಮಹತ್ವದ ನಿರ್ಧಾರವನ್ನು ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಸ್ಟ್.1ರಿಂದ 7ನೇ ವೇತನ ಆಯೋಗವನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
ಮಂಗಳವಾರದಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. 7ನೇ ವೇತನ ಆಯೋಗದ ಜಾರಿಯೇ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಅಜೆಂಡಾ ಆಗಿತ್ತು. ಇಂತಹ ಬೇಡಿಕೆಯನ್ನು ಈಡೇರಿಸುವಂತ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಮಂಗಳೂರು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್.1ರಿಂದ ಜಾರಿಗೊಳಿಸುವಂತೆ 7ನೇ ವೇತನ ಆಯೋಗವನ್ನು ಜಾರಿಗೆ ತರುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೀಗಾಗಿ ಆಗಸ್ಟ್.1ರಿಂದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವು ಜಾರಿಗೊಳ್ಳಲಿದೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ನೀಡಿದೆ.
ಅಂದಹಾಗೇ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಲ್ಲಿ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವುದು. ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಪ್ರಮುಖವಾಗಿದ್ದವು. ಇವುಗಳಲ್ಲಿ 7ನೇ ವೇತನ ಆಯೋಗ ಜಾರಿಗೊಳಿಸುವಂತ ಬೇಡಿಕೆಯನ್ನು ಸಿಎಂ ಸಿದ್ಧರಾಮಯ್ಯ ಈಡೇರಿಸಿದ್ದಾರೆ.