ಬೆಂಗಳೂರು: ಬೆಂಗಳೂರು ಕರಗದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಇದೀಗ ಶಾಸಕ ಎನ್ ಎ ಹ್ಯಾರಿಸ್ ಅವರು, ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕ್ಷಮೆಯಾಚಿಸಿದ್ದಾರೆ. ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಶಾಸಕ ಹ್ಯಾರಿಸ್ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬೆಂಗಳೂರು ಕರಗ ನಾಟಕ ಎಂದು ಹ್ಯಾರಿಸ್ ಹೇಳಿದ್ದರು.
ಹ್ಯಾರಿಸ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನೇರವಾಗಿ ದೇಗುಲಕ್ಕೆ ಬಂದು ಕ್ಷಮೆಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ಹ್ಯಾರಿಸ್, ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ. ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಾನು ಕ್ಷಮೆ ಕೋರಿದ್ದೇನೆ. ಪ್ರತಿವರ್ಷವೂ ಬೆಂಗಳೂರು ಕರಗ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.