ವಾಲ್ಮಿಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರಗೆ ಇಡಿ ಡ್ರಿಲ್ ಮುಂದುವರೆದಿದೆ.
ಸಚಿವರಾಗಿದ್ದಾದ ಇದ್ದಂತಹ ಇಬ್ಬರು ಪಿಎಗಳ ವಿಚಾರಣೆ ಮಾಡಿದ ಇಡಿ ಅಧಿಕಾರಿಗಳು, ಆ ಇಬ್ಬರು ನೀಡಿರುವ ಹೇಳಿಕೆಯ ಆಧಾರದ ಮೇಲೆ ನಾಗೇಂದ್ರಗೆ ಪ್ರಶ್ನೆ ಮಾಡಿದೆ.
ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಜಾರಿ ನಿರ್ದೇಶನಾಲಯ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ನಾಗೇಂದ್ರ ಅವರ ನಿವಾಸಕ್ಕೆ ವಶಕ್ಕೆ ಪಡೆದಿರುವ ಇ.ಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.