ಒಮನ್ ರಾಜಧಾನಿ ಮಸ್ಕತ್ನಲ್ಲಿ ಮಸೀದಿಯ ಬಳಿ ಉಗ್ರರಿಂದ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಆರು ಜನರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಇದರೊಂದಿಗೆ, ಸೋಮವಾರ ರಾತ್ರಿ ನಡೆದಿರುವ ಈ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ಅಲ್-ವದಿ- ಅಲ್-ಕಬೀರ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿದ ಮೂವರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ಭಾರತೀಯ ರಾಯಭಾರ ಕಚೇರಿಯು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ.