ಲಾಸ್ ವೇಗಾಸ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂದು ಶ್ವೇತಭವನ ತಿಳಿಸಿದೆ. ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಸದ್ಯ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಡನ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೂ ಸಹ ಅವರು ತಮ್ಮ ಕೆಲಸಗಳಿಗೆ ಇದರ ಪರಿಣಾಮ ಬೀಳದಂತೆ ನೋಡಿಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ. ಅಧ್ಯಕ್ಷರ ಆರೋಗ್ಯದ ಕುರಿತಾದ ಅಪ್ಡೇಟ್ಗಳನ್ನು ಶ್ವೇತ ಭವನ ನೀಡುತ್ತಲೇ ಇದೆ.
ಈಗಾಗಲೇ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗಿದೆ. ಜೋ ಬೈಡನ್ ಮತ್ತೊಮ್ಮೆ ಕಣಕ್ಕೆ ಇಳಿಯಲಿದ್ದು, ಈ ವೇಳೆ ಅವರ ವಯಸ್ಸು ಭಾರೀ ಚರ್ಚೆಗೆ ಆಹಾರವಾಗಿದೆ. ಈ ವರೆಗೆ ನಡೆದ ಎಲ್ಲ ಸಮೀಕ್ಷೆಗಳಲ್ಲಿ ಬೈಡಾನ್ ಅವರಿಗೆ ಹಿನ್ನಡೆ ಎನ್ನುವುದು ಕಾಣಿಸುತ್ತಿದೆ. ಇವರ ಪ್ರತಿ ಸ್ಪರ್ಧಿ ಡೊನಾಲ್ಡ್ ಟ್ರಂಪ್ ಅವರು ಗೆಲುವು ಸಾಧಿಸ ಬಹುದು ಎಂದು ಲೆಕ್ಕಾಚಾರ ಶುರುವಾಗಿದೆ.
ಯುಎಸ್ ಅಧ್ಯಕ್ಷ ಜೋ ಬೈಡೆನ್ ಪ್ರಚಾರದ ವೇಳೆ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಭಾಷಣ ಮಾಡುತ್ತಿದ್ದಾರೆ. “ಇದನ್ನು ಮಾಡುವುದರಿಂದ ನಾವು ಸತ್ಯವನ್ನು ಮಾತನಾಡುವುದನ್ನು ನಿಲ್ಲಿಸುತ್ತೇವೆ ಎಂದು ಅರ್ಥವಲ್ಲ ಎಂದಿದ್ದಾರೆ.
ಇತ್ತೀಚಿಗೆ ವರದಿಯಾದ ಬೈಡನ್ ಅವರ ಕಳಪೆ ಆರೋಗ್ಯದ ಬಗ್ಗೆ ಹಲವು ಪ್ರಶ್ನೆಗಳನ್ನು ಎದ್ದಿವೆ. ವರದಿಯ ಪ್ರಕಾರ ಬೈಡೆನ್ ಅವರು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಮಾತ್ರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಶ್ವೇತಭವನದ ಉದ್ಯೋಗಿಗಳನ್ನು ಉಲ್ಲೇಖಿಸಿ ಪ್ರಕಟವಾದ ವರದಿಯ ಪ್ರಕಾರ, ಬಿಡೆನ್ ದಿನಕ್ಕೆ 6 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.