ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರ ಭಾಗದಲ್ಲಿ ಮಳೆ ಅಬ್ಬರ ಕಡಿಯೆಯಾದರೆ, ಗ್ರಾಮಿಣ ಭಾಗದಲ್ಲಿ ಮುಂದುವರಿದಿದೆ. ನಗರ ಭಾಗ ಹೊರತು ಪಡಿಸಿ ಗ್ರಾಮಿಣ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ ಮಾಡಲಾಗಿದೆ. ಕಡಬ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಇಚ್ಲಂಪಾಡಿಯಲ್ಲಿ ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.
ರಸ್ತೆಗೆ ಗುಂಡ್ಯ ಹೊಳೆ ನೀರು ಹರಿದು ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಉಳ್ಳಾಕ್ಲು ದೇವಸ್ಥಾನ, ನದಿಬದಿಯ ಕೃಷಿ ತೋಟಗಳು ಜಲಾವೃತಗೊಂಡಿದೆ. ಅಪಾಯದ ಮಟ್ಟದಲ್ಲಿ ನೇತ್ರಾವತಿ ನದಿ ಹರಿಯುತ್ತಿದ್ದು, ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.