ರಾಜಸ್ಥಾನ:- ಒಂದೇ ಕುಟುಂಬದ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ಸಂಭವಿಸಿದೆ. ಹನುಮಾನ್ಗಢ್ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಕ್ಕಿಬಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಡಬೇಕಾಯಿತು.
ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಹನುಮಾನ್ಗಢದಿಂದ ಬಿಕಾನೇರ್ ಕಡೆಗೆ ಹೋಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ, ಆ ರಭಸಕ್ಕೆ ಕಾರು ಹಾರಿ ಹೋಗಿತ್ತು. ಮಹಾಜನ್ ಪೊಲೀಸರು, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ವೇಗವಾಗಿತ್ತು ಅಷ್ಟೇ ಅಲ್ಲದೆ ರಾತ್ರಿಯಾಗಿತ್ತು, ಚಾಲಕನಿಗೆ ಟ್ರಕ್ ಮುಂದೆ ಹೋಗುತ್ತಿರುವುದು ಕಾಣಿಸಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ. ಕುಡಲೇ ಅಂಬ್ಯುಲೆನ್ಸ್ ಅಲ್ಲಿಗೆ ತಲುಪಿತ್ತು ಈ ಅಪಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.