ಬೆಂಗಳೂರು ದಕ್ಷಿಣದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ. ಕಳೆದ ಒಂದು ವರ್ಷದಿಂದ ಬಾಕಿ ಹಣ ಪಾವತಿ ಮಾಡಿಲ್ಲ ಎಂದು ಆಹಾರ ಪೂರೈಕೆಯ ಟೆಂಡರ್ ಪಡೆದಿದ್ದ ಶೆಫ್ ಟಾಕ್ ಸಂಸ್ಥೆ ಆಹಾರ ಪೂರೈಸುತ್ತಿಲ್ಲ. ಇದರಿಂದ ಪಾಲಿಕೆಯ ದಕ್ಷಿಣ ವಲಯಕ್ಕೆ ಬರುವ 11ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ಗಳು ಕಳೆದ 15-20 ದಿನಗಳಿಂದ ಬಾಗಿಲು ಬಂದ್ ಮಾಡಿವೆ.
ಬಡವರ ಪಾಲಿನ ಅಕ್ಷಯ ಪಾತ್ರೆ ಅಂತಲೇ ಕರೆಸಿಕೊಳ್ಳುತ್ತಿದ್ದ ಇಂದಿರಾ ಕ್ಯಾಂಟೀನ್ಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಈ ರೀತಿ ಅವನತಿಯ ಹಾದಿ ಹಿಡಿದಿರೋದು ಸಿಎಂ ಸಿದ್ದರಾಮಯ್ಯರಿಗೆ ಮುಜುಗರ ತರಿಸಿದೆ. ಅದರಲ್ಲೂ ನಗರದ ಪ್ರಮುಖ ಆಸ್ಪತ್ರೆಗಳ ಆವರಣ, ಅಕ್ಕಪಕ್ಕದಲ್ಲಿರುವ ಕ್ಯಾಂಟೀನ್ಗಳೇ ಮುಚ್ಚಿದ್ದು, ನಿಜವಾಗಿ ಯಾರಿಗೆ ಯೋಜನೆ ತಲುಪಬೇಕಿತ್ತೋ ಅವರೇ ಯೋಜನೆ ಸಿಗದೇ ಪರದಾಡುವಂತಾಗಿದೆ.
ಇತ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ 174 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟಿನ್ಗಳಿವೆ. ಶುರುವಾದಾಗಿನಿಂದ ಪ್ರತಿ ನಿತ್ಯ ಮೂರೂವರೆ ಲಕ್ಷ ಜನ ಊಟ, ತಿಂಡಿ ಮಾಡುತ್ತಿದ್ದರು. ಕಳೆದ ಒಂದು ವರ್ಷದಿಂದ ಕಂಪನಿಗೆ ಪಾಲಿಕೆ 40 ಕೋಟಿ ಹಣ ನೀಡಬೇಕಿದೆ. ಕ್ಯಾಂಟೀನ್ ಸಿಬ್ಬಂದಿ ಸಂಬಳ, ದಿನಸಿ ಬಿಲ್ ಸಮಸ್ಯೆಯಿಂದಾಗಿ ಟೆಂಡರ್ ಪಡೆದ ಸಂಸ್ಥೆ ಕ್ಯಾಂಟೀನ್ಗೆ ಬೀಗ ಹಾಕಿದೆ. ಬಸವನಗುಡಿ, ಪದ್ಮನಾಭನಗರ, ಚಿಕ್ಕಪೇಟೆ, ಜಯನಗರ ಕ್ಷೇತ್ರಗಳಲ್ಲಿ ಕ್ಯಾಂಟೀನ್ಗಳಿಗೆ ಬೀಗ ಹಾಕಲಾಗಿದೆ. ಇತ್ತ ಬಿಬಿಎಂಪಿಯ ಅಧಿಕಾರಿಗಳನ್ನ ಕೇಳಿದ್ರೆ ಎಲ್ಲವನ್ನೂ ಸರಿಪಡಿಸ್ತೀವೆ ಅಂತಾ ಸಬೂಬು ನೀಡ್ತಿದ್ದಾರೆ
ಸದ್ಯ ಇಂದಿರಾ ಕ್ಯಾಂಟೀನ್ ಬಂದ್ ಆಗಿರೋದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರದ ವಿರುದ್ಧ ಚಾಟಿಬೀಸಿದ್ದಾರೆ. ಬಿಜೆಪಿ ಅವಧಿಯಲ್ಲಿ