ಬೆಂಗಳೂರು: ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬೆಂಗಳೂರಿನ ಹೈಕೋರ್ಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 57 ಸಿವಿಲ್ ನ್ಯಾಯಾಧೀಶ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಕಲು ಏಪ್ರಿಲ್ 10, 2023 ಕೊನೆಯ ದಿನಾಂಕವಾಗಿದೆ. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಬಹುದು. ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 10, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು ಎಂದು ತಿಳಿಸಿದೆ.