ಕಡಿದಾಗಿ ಮಣ್ಣು ತೆಗೆದಿದ್ದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿಯಲು ಕಾರಣವಾಗಿದೆ ಅದನ್ನು ಸರಿಪಡಿಸಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಇಂಜಿನಿಯರ್ ಹಾಗೂ ಅಧಿಕಾರಿಗಳ ಲೋಪದಿಂದ ಕಾಡಿದಾಗಿ ಮಣ್ಣು ತೆಗೆಯಲಾಗಿದೆ ಇದರಿಂದ ಮಳೆಗಾಲದಲ್ಲಿ ಸುರಿಯುವ ಮಳೆಗೆ ಮಣ್ಣು ಕುಸಿಯಲು ಕಾರಣವಾಗಿದೆ ಎಂದರು.
ಈ ಬಗ್ಗೆ ಇದೀಗ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಜೊತೆಗೆ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.