ಮಗುವಿನೊಂದಿಗೆ ಹೊರಗೆ ಹೋಗುತ್ತಿದ್ದ ತಾಯಿಯ ಮೇಲೆ ಮಹಿಳೆಯೊಬ್ಬಳು ಗುಂಡಿನ ದಾಳಿ ನಡೆಸಿದ್ದು, ಗುಂಡು ಮಗುವಿನ ಕಾಲಿಗೆ ತಾಗಿದ ಘಟನೆ ಅಮೆರಿಕದ ಫಿಲಿಡೆಲ್ಫಿಯಾದಲ್ಲಿ ನಡೆದ. ಸದ್ಯ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು ಈ ಭಾಯಾನಕ ಘಟನೆಗೆ ಅಮೆರಿಕ ಬೆಚ್ಚಿ ಬಿದ್ದಿದೆ.
ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿಕೊಂಡ ಮಹಿಳೆ ಹೊರಗೆ ತೆರಳಿದ್ದಾರೆ. ಈ ವೇಳೆ ಮಹಿಳೆ ಮೇಲೆ ದರೋಡೆಕೋರ ಮಹಿಳೆಯೊಬ್ಬಳು ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದ್ದು ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ..
ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಗುಂಡು ಹಾರಿಸಿದ ದರೋಡೆಕೋರ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗುವಿನ ಮೇಲೆ ಗುಂಡು ಹಾರಿಸಿರುವ ಭಯಾನಕ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಮಗು ಮತ್ತು ಪೋಷಕ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಏಕಾಏಕಿ ಬಂದು ಅವರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ದರೋಡೆಕೋರ ಮಹಿಳೆಯು ಹಲವು ಬಾರಿ ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಪೊಲೀಸರು ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದು, 2024ರ ಜುಲೈ 18ರಂದು ಮೆರಿಡಿಯನ್ ಸ್ಟ್ರೀಟ್ನ 4000 ಬ್ಲಾಕ್ನಲ್ಲಿ ಏಳು ತಿಂಗಳ ಮಗುವಿನ ಕಾಲಿನ ಮೇಲೆ ಮಹಿಳೆಯೊಬ್ಬಳು ಗುಂಡು ಹರಿಸಿದ್ದಾಳೆ. ಗುಂಡಿನ ದಾಳಿಯಲ್ಲಿ ಬೇರೆ ಯಾರಿಗೂ ಗಾಯವಾಗಿಲ್ಲ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಬರೆದುಕೊಂಡಿದ್ದಾರೆ.