ಬೆಂಗಳೂರು:- ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಚಾರವಾಗಿ ಕಾಮೆಂಟ್ ಮಾಡಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಅಲ್ಲದೆ #boycott phonepe, #uninstallPhonepe ಎನ್ನುವ ಹ್ಯಾಷ್ಟ್ಯಾಗ್ಗಳು ಟ್ರೆಂಡ್ ಸೃಷ್ಟಿಸಿವೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ Boycottphonepay ಅಭಿಯಾನ ಶುರುವಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ Phonepe ಸಿಇಎ ಸಮೀರ್ ನಿಗಮ್ ಅಸಮಾಧಾನ ಹೊರ ಹಾಕಿದ್ದರು. ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ಹೊರ ಹಾಕಿದ್ದು #Boycott ಅಭಿಯಾನ ಆರಂಭಿಸಿವೆ. ಕನ್ನಡಿಗರು ಈ ಅಪ್ಲಿಕೇಷನ್ ಬಳಸಬೇಡಿ ಎಂದು ಕರೆ ನೀಡಲಾಗಿದೆ. ಫೋನ್ ಪೇ ವಿರುದ್ಧ ಹೊರಾಟಕ್ಕೆ ಕನ್ನಡಿಗರು ಹಾಗೂ ಹೋರಾಟಗಾರರು ಮುಂದಾಗಿದ್ದಾರೆ.
ಸಮೀರ್ ನಿಗಮ್ ಅವರೇ ನೀವು ಬೆಳೆಯಲು ಕರ್ನಾಟಕ ಬಹಳಷ್ಟು ಸಹಾಯ ಮಾಡಿದೆ, ನೀವು ನಿಮ್ಮ ವೃತ್ತಿ ಜೀವನವನ್ನು ಉತ್ತಮಗೊಳಿಸಲು ಬಂದಿದ್ದೀರಿ, ಬೆಂಗಳೂರನ್ನು ಬೆಳೆಸುವುದಕ್ಕೆ ಅಲ್ಲ. ಫೋನ್ ಪೇಗೆ ಗುಡ್ ಬೈ ಹೇಳುವ ಸಮಯ ಈಗ ಬಂದಿದೆ’ ಎಂದು ಬಳಕೆದಾರರೊಬ್ಬರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಫೋನ್ ಪೇ ಆಯಪ್ ಅನ್ನು ಫೋನ್ನಿಂದ ಡಿಲೀಟ್ ಮಾಡುವ ವಿಡಿಯೋ