ಉತ್ತರಕನ್ನಡ: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಬಂದ ಆಗಿದೆ. ಹೀಗಾಗಿ ಸದ್ಯ ಹಾನಿಯಾದ ಜಿಲ್ಲೆಯ ಸ್ಥಳಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಹೊರಟಿದ್ದಾರೆ.
ಸಿಎಂ ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಾಥ್ ನೀಡಿದ್ದು, ಜಿಲ್ಲೆಯ ಅಧಿಕಾರಿಗಳು, ನೌಕಾಪಡೆ, ಕೆಪಿಸಿಎಲ್ ಎನ್ ಪಿ ಸಿ ಎಲ್, ರಕ್ಷಣಾ ತಂಡದ ಜೊತೆಗೆ ಸಿಎಂ ಸಮಾಲೋಚನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಸೇರಿ ಪ್ರಮುಖರ ಜೊತೆಗೆ ನೆರೆ ಹಾನಿ ಪ್ರದೇಶ ಗಳಿಗೆ ಭೇಟಿ ನೀಡಲಿದ್ದಾರೆ. ಅದಲ್ಲದೆ ಸಂತ್ರಸ್ತರನ್ನು ಕೂಡ ಭೇಟಿ ಮಾಡಲಿದ್ದಾರೆ.