ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ರಕ್ಷಣೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ತಯಾರಿದ್ದೇವೆ.
ಆದರೆ, ರಾಜಕೀಯ ದ್ವೇಷಕ್ಕಾಗಿ ಅಧಿಕಾರ ದುರುಪಯೋಗ ಆಗಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಹಣ ಚುನಾವಣಾ ರಾಜಕಾರಣಕ್ಕೆ, ಮದ್ಯ ಖರೀದಿಗೆ ಹೋಗಿರುವುದು ಗೊತ್ತಾಗಿದೆ. ಈ ಬಗ್ಗೆ ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿಯ ಅವಧಿಯಲ್ಲಿ 21 ಹಗರಣ ಆಗಿದೆ ಎಂದು ಆರೋಪಿಸಿದ್ದಾರೆ.
ಬಹಳ ಕಷ್ಟ ಪಟ್ಟು ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಈಗ ಕಣ್ಣು ತೆರೆದು ನೋಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾರೆ. ಯಾವುದೇ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ಧರಿದ್ದೇವೆ. ಆದರೆ, ತನಿಖೆ ಹೆಸರಲ್ಲಿ ಅಧಿಕಾರ ದುರ್ಬಳಕೆ ಆಗಬಾರದು, ಅವರು ಮಾಡಿರುವ ಆರೋಪಕ್ಕೆ ದಾಖಲೆ ನೀಡಬೇಕಿತ್ತು ಎಂದು ಆಗ್ರಹಿಸಿದರು.
ನನ್ನ ವಿರುದ್ಧ ಮಾಡಿರುವ ಆರೋಪದಲ್ಲಿ ನಾನು ಎಪಿಎಂಸಿ ಸಚಿವನಾಗಿರಲಿಲ್ಲ, ಆಗ ಗೃಹ ಸಚಿವನಾಗಿದ್ದೆ, ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರೂ. ಜೊತೆಗೆ ಬಡ್ಡಿ ಸಮೇತ 52 ಕೋಟಿ ರೂ. ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ,
ಅದರ ತನಿಖೆ ನಡೆಯುತ್ತಿದೆ. ಗಂಗಾ ಕಲ್ಯಾಣ ಯೋಜನೆ ದುರುಪಯೋಗದ ಆರೋಪ ಕೇಳಿ ಬಂದಾಗ ನಾನೇ ಸದನದಲ್ಲಿ ಸಿಐಡಿ ತನಿಖೆಗೆ ನೀಡಿದ್ದೇನೆ. ಅದರ ತನಿಖೆ ಕೊನೆ ಹಂತಕ್ಕೆ ಬಂದಿದೆ. ನಮ್ಮ ವಿರುದ್ದ 40% ಆರೊಪವನ್ನು ಮಾಡಿದ್ದರು. ಇದುವರೆಗೂ ಯಾವುದೇ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ನೋಟಿಸ್ ಕೊಟ್ಟಿಲ್ಲ. ರಾಜಕೀಯ ಉದ್ಯೇಶದಿಂದ ಆಯೊಗ ಮಾಡಿದರೆ, ತನಿಖೆ ನಡೆಸಿದರೆ ಹೀಗೆ ಆಗುವುದು ಎಂದು ತಿರುಗೇಟು ನೀಡಿದರು.