ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ನಡೆದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭಾನುವಾರ ಭೇಟಿ ನೀಡಿದ್ದು, ಕಾರ್ಯಾಚರಣೆ ಪರಿಶೀಲಿಸಿದರು. ಕರ್ನಾಟಕದ ಅಂಕೋಲಾದ ಶಿರೂರು ಬಳಿ ಘಟನಾ ಸ್ಥಳದಲ್ಲಿ ಕೇರಳದ ಟ್ರಕ್ ಚಾಲಕ ಅರ್ಜುನ್ಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರಿಶೀಲಿಸಿದರು.
ಸಚಿವರಿಗೆ ಆರ್ ವಿ ದೇಶಪಾಂಡೆ ಸಾಥ್ ನೀಡಿದರು.
ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು, ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇನ್ನೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪುಡಿಗಾಸು ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಅವರು ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವ ಕೆಲಸ ಮಾಡಲಿ. ನಮ್ಮ ಕೆಲಸ ನಾವು ಮಾಡುತ್ತೇವೆ ಎಂದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪುಡಿಗಾಸು ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಅವರು ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವ ಕೆಲಸ ಮಾಡಲಿ. ನಮ್ಮ ಕೆಲಸ ನಾವು ಮಾಡುತ್ತೇವೆ ಎಂದರು. ಕುಸಿಯುವ ಗುಡ್ಡದ ಮಧ್ಯೆ ಎಸ್ಡಿಆರ್ಎಫ್, ಎಸ್ಡಿಆರ್ಎಫ್ ಕೆಲಸ ಮಾಡುತ್ತಿದೆ. ಜೆಸಿಬಿ, ಹಿಟಾಚಿ ಬಳಸಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದೇವೆ. ಅಲ್ಲದೆ ಮೃತರಿಗೆ ಘಟನೆ ನಡೆದ ಸಂಜೆ ಅದೇ ದಿನ 5 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.