ಮೈಸೂರು: ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆಯಾಗಿದ್ದಾರೆ. ಮೈಸೂರಿನ ಸರ್ದಾರ್ ವಲ್ಲಭಾಯಿನಗರದ ನಿವಾಸಿ ಸುಪ್ರಿತಾ ಅವರು ಭಾರತೀಯ ಸೇನಾ ಪಡೆಯ ಕ್ಯಾಪ್ಟನ್. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ.
ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಖ್ಯಾತಿ ಗಳಿಸಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್, ನಿರ್ಮಲಾ ದಂಪತಿ ಪುತ್ರಿ ಸುಪ್ರಿತಾ. ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್ಎಲ್ಬಿ ಪದವಿ ಹಾಗೂ ಎನ್ಸಿಸಿ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ