ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಭೀತಿ, ಅವಾಂತರಗಳು ಸಂಭವಿಸಿವೆ. ಕೃಷ್ಣೆಯ ಒಳ ಹರಿವು 1.50 ಲಕ್ಷ ಕ್ಯೂಸೆಕ್ ದಾಟಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ದೂದ್ಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ.
ರೈತರ ಜಮೀನುಗಳಿಗೆ ನದಿ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ 4 ಸೇತುವೆಗಳು ಮುಳುಗಡೆಯಾಗಿವೆ. 4 ಸೇತುವೆಗಳ 2 ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ.