ಶಿರೂರು ಗುಡ್ಡ ಕುಸಿತದಿಂದ ಉಳುವರೆ ಗ್ರಾಮಕ್ಕೆ ನದಿ ನೀರು ನುಗ್ಗಿದ್ದು, ಎರಡು ಮನೆ ನೆಲಸಮವಾಗಿದೆ.
ಇನ್ನೂ ಹಲವು ಮನೆಗಳು ಶಿಥಿಲಗೊಂಡಿವೆ. ಈ ಮನೆಗಳು ಆಗಲೋ ಈಗಲೋ ಬೀಳುವ ಹಂತದಲ್ಲಿವೆ.
ದುರಂತದಲ್ಲಿ 14 ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳುವರೆ ಗ್ರಾಮದ 30ಕ್ಕೂ ಹೆಚ್ಚು ಕುಟುಂಬ ಬೀದಿಪಾಲಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿವೆ. ಉಳುವರೆ ಗ್ರಾಮದ ಮೀನುಗಾರರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.
ಇನ್ನೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಏಳು ದಿನ ಕಳೆದಿದೆ. ನಿರಂತರ ಧಾರಾಕಾರ ಮಳೆಯಲ್ಲೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ದಿಢೀರ್ ಕುಸಿದ ಗುಡ್ಡ ಪಕ್ಕದಲ್ಲಿ ಹರಿಯುತ್ತಿದ್ದ ಗಂಗಾವಳಿ ನದಿಯಲ್ಲಿ ಬಿದ್ದಿದೆ