ರೈಲ್ವೇ ಕಾಮಗಾರಿ ಹಿನ್ನೆಲೆ 2 ದಿನಗಳ ಕಾಲ ರಾಜ್ಯದ 8 ರೈಲುಗಳನ್ನು ರದ್ದು ಮಾಡಲಾಗಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಹಲವು ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗಿದೆ
8 ರೈಲುಗಳ ಸಂಚಾರ ರದ್ದು
ಈ ಕೆಳಗಿನ ರೈಲುಗಳ ಸಂಚಾರ ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ರದ್ದಾಗಲಿವೆ.
ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್.
ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್.
ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ಪ್ರೆಸ್.
ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್ಪ್ರೆಸ್.
ರೈಲು ಸಂಖ್ಯೆ, 06576 ತಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್.
ರೈಲು ಸಂಖ್ಯೆ 06575 KSR ಬೆಂಗಳೂರು-ತುಮಕೂರು ಮೆಮು ಸ್ಪೆಷಲ್
ರೈಲು ಸಂಖ್ಯೆ 16579 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್ಸಿಟಿ ಡೈಲಿ ಎಕ್ಸ್ಪ್ರೆಸ್.
ರೈಲು ಸಂಖ್ಯೆ 16580 ಶಿವಮೊಗ್ಗ ಟೌನ್-ಯಶವಂತಪುರ ಇಂಟರ್ಸಿಟಿ ಡೈಲಿ ಎಕ್ಸ್ಪ್ರೆಸ್.
ಭಾಗಶಃ ರದ್ದು
ಈ ಕೆಳಗಿನ ರೈಲುಗಳು ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ಭಾಗಶಃ ರದ್ದಾಗಲಿವೆ.
ರೈಲು ಸಂಖ್ಯೆ 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮಮು ವಿಶೇಷ ರೈಲು ಹಿರೇಹಳ್ಳಿ- ಶುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿವೆ. ಮತ್ತು ಈ ರೈಲು ಹಿರೇಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.
ರೈಲು ಸಂಖ್ಯೆ 06572 ತುಮಕೂರು-ಕೆಎಸ್ಆರ್ ಬೆಂಗಳೂರು ಮಮು ವಿಶೇಷ ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಮತ್ತು ಈ ರೈಲು ಹಿರೇಹಳ್ಳಿಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.
ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸಪ್ರೆಸ್ ರೈಲು ಅರಸಿಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.
ರೈಲು ಸಂಖ್ಯೆ 12726 ಧಾರವಾಡ-ಕೆಎಸ್ಆರ್ ಬೆಂಗಳೂರು ಸಿದ್ದಗಂಗಾ ಡೈಲಿ ಎಕ್ಸಪ್ರೆಸ್ ಅರಸೀಕೆರೆ- ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.
ರೈಲು ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಡೈಲಿ ಎಣ್ಣೆಪ್ರೆಸ್ ಕೆಎಸ್ಆರ್. ಬೆಂಗಳೂರು-ಅರಸಿಕರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.
ರೈಲುಗಳ ಮಾರ್ಗ ಬದಲಾವಣೆ
ಆಗಸ್ಟ್ 7 ಮತ್ತು 14 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ-ಡ-ಗಾಮಾ-ಯಶವಂತಪುರ ಡೈಲಿ ಎಕ್ಸ್ಪ್ರೆಸ್ ರೈಲು ಅರಸೀಕರೆ, ಹಾಸನ ನೆಲಮಂಗಲ್ಸ್ ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಕೂರು
ವಿಲ್ದಾಣಗಳಲ್ಲಿ ನಿಗದಿತ ವಿಲುಗಡೆ ಇರುವುದಿಲ್ಲ.
ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 22687 ಮೈಸೂರು ವಾರಣಾಸಿ ದ್ವಿ-ಸಾಪ್ತಾಹಿಕ ಸೂವರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ಆಗಸ್ಟ್ 8 ಮತ್ತು 15 ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 82653 ಯಶವಂತಪುರ-ಜೈಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ.
ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17326 ಮೈಸೂರು ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ರೈಲುಗಳ ನಿಯಂತ್ರಣ
ಆಗಸ್ಟ್ 6 ಮತ್ತು 13 ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್- ಯಶವಂತಪುರ -ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 150 ನಿಮಿಷ ನಿಯಂತ್ರಿಸಲಾಗುತ್ತದೆ.
ಆಗಸ್ಟ್ 8 ಮತ್ತು 15 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ- ಹಜರತ್ ನಿಜಾಮುದ್ದೀನ್ ರೈಲನ್ನು ಮಾರ್ಗ ಮಧ್ಯ 50 ನಿಮಿಷ ನಿಯಂತ್ರಿಸಲಾಗುತ್ತದೆ.
ಆಗಸ್ಟ್ 8 ಮತ್ತು 15 ರಂದು ರ್ಯಲು ಸಂಖ್ಯೆ 20651 ಕೆಎಸ್ಆರ್ ಬೆಂಗಳೂರು ತಾಳಗುಪ್ಪ ಡೈಲಿ ಪರ್ಫಾಸ್ಟ ಎಕ್ಸ್ಪ್ರೆಸ್ ರೈಲನ್ನು ಮಾರ್ಗದಲ್ಲಿ 10 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.
ಆಗಸ್ಟ್ 8 ಮತ್ತು 15 ರಂದು ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 17325 ಬೆಳಗಾವಿ ಮೈಸೂರು ವಿಶ್ವಮಾನವ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮಾರ್ಗದಲ್ಲಿ 55 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ಮಾರ್ಗದಲ್ಲಿ 120 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.