ರಾಜ್ಯ ಸಚಿವ ಸಂಪುಟ ಬೆಂಗಳೂರು ವಿಭಜಿಸುವ ಮಸೂದೆಗೆ ಅನುಮೋದನೆ ನೀಡಿದೆ ವಿಧಾನಸೌಧದಲ್ಲಿ ನಡೆದ ಕ್ಯಾಬಿನೆಟ್ ಸಭೆ ಬೆಂಗಳೂರನ್ನ 5 ವಿಭಾಗಗಳಾಗಿ ವಿಭಜಿಸುವ ಮಸೂದೆಗೆ ಒಪ್ಪಿಗೆ ನೀಡಿದೆ.
ಬಿ ಎಸ್ ಪಾಟೀಲ್ ನೇತೃತ್ವದಲ್ಲಿ ನಡೆದ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ಸಿಕ್ಕಿದೆ. ಸಮಿತಿಯ ಶಿಫಾರಸುಗಳನ್ನು ಒಪ್ಪಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದ್ದು ಮಂಗಳವಾರ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ.
ಈ ವೇಳೆ ಕೇಂದ್ರ ಸರ್ಕಾರದ ಮೂರು ಪ್ರಮುಖ ವಿಚಾರಗಳ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ನೀಟ್ ಪರೀಕ್ಷೆಗೆ ವಿರೋಧ, ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ಖಂಡನೆ, ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಮಂಗಳವಾರ ನಿರ್ಣಯ ಮಂಡನೆಯಾಗಲಿದೆ.