ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ನಿರ್ಮಲಾ ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ ಈ ಬಜೆಟ್ ಎಂದು ನಿರ್ಮಲಾ ಹೇಳಿದರು.
ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.
ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.