ಬೆಂಗಳೂರು:- ಕೆ.ಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದವರಿಗೆ ಇನ್ನು ಮುಂದೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಇತ್ತ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ಕಂಡಕ್ಟರ್ ಗಳು ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ.
ಈ ಹಿಂದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದ ವಾಹನ ಸವಾರರು, ಪಾದಚಾರಿಗಳಿಗೆ ಕೇವಲ ೨೫ ಸಾವಿರ ರೂಪಾಯಿ ಪರಿಹಾರ ನೀಡಲಾಗ್ತಿತ್ತು. ಇಂದಿನಿಂದ ಹತ್ತು ಲಕ್ಷ ಪರಿಹಾರ ನೀಡಲಾಗುತ್ತದೆ. ಅಲ್ಲದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸದ ಅವಘಡ, ಬಸ್ ಆಕ್ಸಿಡೆಂಟ್ ನಿಂದ ಮೃತಪಡುವ ಪ್ರಯಾಣಿಕರಿಗೂ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ಈ ಹಿಂದೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ,ಕಂಡಕ್ಟರ್ ಗಳು ಆಕ್ಸಿಡೆಂಟ್ ಆಗಿ ತೀರಿಕೊಂಡರೆ ಕೇವಲ ೩ ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಈಗ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.