ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.