ಮಂಡ್ಯ ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕ್ಷಣ ಕ್ಷಣಕ್ಕೂ ಕೃಷ್ಣರಾಜಸಾಗರ ಜಲಾಶಯದ (KRS Dam) ಒಳಹರಿವಿನಲ್ಲಿ ಹೆಚ್ಚಳ ಕಾಣುತ್ತಿದೆ. ಕನ್ನಂಬಾಡಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, 1.50 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
3 ದಿನಗಳ ವಿರಾಮದ ಬಳಿಕ ಕೊಡಗಿನಲ್ಲಿ ಜೋರು ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಕುಶಾಲನಗರ ತಾಲೂಕಿನ ಕಣಿವೆ ಭಾಗದಲ್ಲಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ.
ಸೋಮವಾರಪೇಟೆ, ಭಾಗಮಂಡಲ ತಲಕಾವೇರಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆಯಾಗಿದೆ. ಇದೆಲ್ಲದರ ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ರಂಗನತಿಟ್ಟು ಪಕ್ಷಿಧಾಮ ಸೇರಿ ನದಿಪಾತ್ರದ ಪ್ರವಾಸಿ ತಾಣಗಳು ಮುಳುಗುವ ಆತಂಕ ಸೃಷ್ಟಿಯಾಗಿದೆ.