ಬೆಂಗಳೂರು: ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷವಾದ ಕಾರ್ಯಾಚರಣೆಗಳನ್ನು ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆಗಳ ಸುರಕ್ಷತೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಕುಮಾರ್ ಅವರು ಸೂಚನೆಯನ್ನು ನೀಡಿದ್ದಾರೆ.
ನಿರ್ಬಂಧಿತ ಮಾರ್ಗದಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದರೆ, ಸಂಚಾರ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸರು ಹೊಸ ನಿಯಮ ಜಾರಿಗೊಳಿಸುತ್ತಿದ್ದಾರೆ. ಪೊಲೀಸರು ಆಗಸ್ಟ್ 1 ರಿಂದ ರಾಂಗ್ ಸೈಡ್ ಡ್ರೈವಿಂಗ್, ಫುಟ್ಪಾತ್ ಡ್ರೈವಿಂಗ್ ಮತ್ತು ದೋಷಯುಕ್ತ ನಂಬರ್ ಪ್ಲೇಟ್ಗಳ ವಿರುದ್ಧ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಆಗಸ್ಟ್ 31 ರೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.
ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಈಗಾಗಲೇ ಅತಿ ಪ್ರಖರದ ಬೆಳಕನ್ನು ಹೊರಹಾಕುವ ಮತ್ತು ಕಣ್ಣು ಕುಕ್ಕುವಂತಹ LED ಲೈಟ್ ಗಳನ್ನು ಅಳವಡಿಸಿರುವಂತಹ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷವಾದ ಕಾರ್ಯಾಚರಣೆಯನ್ನು ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಪ್ರಯಾಣಿಕರು ರಾಂಗ್ ಸೈಡ್ನಲ್ಲಿ ವಾಹನ ಚಲಾಯಿಸುವುದು ಕಂಡುಬಂದರೆ ಅವರ ವಿರುದ್ಧ BNS ನ ಸೆಕ್ಷನ್ 281 ಮತ್ತು IMV ಯ 184 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವುದು ಕಂಡುಬಂದಲ್ಲಿ ಪ್ರಯಾಣಿಕರು ಚಾಲನಾ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುವುದು ರಾಜ್ಯದಲ್ಲಿ ಅಪಘಾತಗಳಿಗೆ ಕಾರಣವಾಗುವ ಉಲ್ಲಂಘನೆಗಳನ್ನು ಕಡಿಮೆ ಮಾಡಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.