ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024″ಕ್ಕೆ ಅನುಮೋದನೆ.
ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ.
ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ.
2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್ನಲ್ಲಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ಒಪ್ಪಿಗೆ.
ಕರ್ನಾಟಕ ಸರ್ಕಾರದ ಮುಂದಿನ ಮುಖ್ಯಕಾರ್ಯದರ್ಶಿಯನ್ನಾಗಿ ರಜನೀಶ್ ಗೋಯೆಲ್ ಅವರ ನೇಮಕಕ್ಕೆ ಗ್ರೀನ್ ಸಿಗ್ನಲ್.