ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ.
ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.
ಈ ನಡುವೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಂಜನಗೂಡು ಕ್ಷೇತ್ರದಿಂದ ಮಹದೇವಪ್ಪ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ ಎಂದರು.