ಬೆಂಗಳೂರು:- ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪೋಕ್ಸೊ ಪ್ರಕರಣದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್ 3 ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು