ಬೆಂಗಳೂರು ಕೋರಮಂಗಲ ಪಿಜಿಯಲ್ಲಿ ನಡೆದ ಯುವತಿಯ ಕೊಲೆ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು..ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ಜುಲೈ 23ರ ರಾತ್ರಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್, ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.
ಇನ್ನೂ ಕೋರಮಂಗಲದ ಮಹಿಳಾ ಪಿಜಿ ಹಾಸ್ಟೆಲ್ ನಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಕೊಲೆ ಕೃತ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಕೊಲೆ ಮಾಡುತ್ತಿರುವ ದೃಶ್ಯ ಭಯಾನಕವಾಗಿದೆ. ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ ಆರ್ತನಾದ ಮಾಡುತ್ತಿದ್ದರೂ ಅಲ್ಲಿದ್ದ ಇತರ ಯುವತಿಯರು ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಕಳೆದ ಜು.೨೩ರಂದು ಕೋರಮಂಗಲದ ಮಹಿಳಾ ಪಿಜಿ ಹಾಸ್ಟೆಲ್ ನಲ್ಲಿ ಕೃತಿ ಕುಮಾರಿಯ ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಮನ ಬಂದಂತೆಇರಿದು ಕತ್ತನ್ನು ಕೋಳಿ ಕತ್ತಿನಂತೆ ಕೊಯ್ದು ಎರಡೇ ನಿಮಿಷದಲ್ಲಿ ಕೊಲೆಮಾಡಿ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ.ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು,
ಆಕೆಯನ್ನು ಕಾರಿಡಾರ್ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ