ಮಂಡ್ಯ ಭಾರೀ ಮಳೆಯಿಂದ ಸಂಪೂರ್ಣ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟಿಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭಾಗಿನ ಅರ್ಪಿಸಲಿದ್ದಾರೆ.
ಜಿಲ್ಲೆಯ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ ನದಿಗೆ ಒಂದು ಲಕ್ಷ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನ ಹರಿಬಿಡಲಾಗಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಅಷ್ಟೇ ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಟಿ ಆಗಿದೆ. ಇನ್ನು ಕಾವೇರಿ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಜಲಾವೃತವಾದರೇ, ನೂರಾರು ವರ್ಷಗಳ ಇತಿಹಾಸ ಇರುವ ವೆಲ್ಲಾಸ್ಲೆ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಅಲ್ಲದೆ ರಸ್ತೆಗೂ ಕೂಡ ನದಿ ನೀರು ನುಗ್ಗಿದೆ.
ಎರಡು ವರ್ಷಗಳ ನಂತರ ಹಳೇ ಮೈಸೂರು ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್ಎಸ್ಗೆ ಬಾಗಿನ ಅರ್ಪಿಸುತ್ತಿದ್ದಾರೆ.