ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಹುಲಿ ಗಂಭೀರವಾದ ಮತ್ತು ಭವ್ಯವಾದ ಪ್ರಾಣಿ. ಇತ್ತಿಚಿನ ದಿನಗಳಲ್ಲಿ ಅಳುವಿನಂಚಿನತ್ತ ಹುಲಿಯ ಸಂತತಿಯು ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.
ಪ್ರತಿಯೊಂದು ಪ್ರಾಣಿ ಪಕ್ಷಿಗಳು ಈ ಪರಿಸರ ವ್ಯವಸ್ಥೆಯಲ್ಲಿ ಇರಲೇಬೇಕು. ಆದರೆ ಅತೀ ವೇಗವಾಗಿ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯನ್ನು ರಕ್ಷಿಸುವ ಸಲುವಾಗಿ ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.
ಅಕ್ರಮವಾಗಿ ನಡೆಸುತ್ತಿರುವ ವನ್ಯಜೀವಿಗಳ ವ್ಯಾಪಾರ, ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಹಾಗೂ ಕಾಡಿನ ನಾಶದಿಂದಾಗಿ ಹುಲಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಜಗತ್ತಿನ ಕೇವಲ 13 ರಾಷ್ಟ್ರಗಳಲ್ಲಿ ಮಾತ್ರ ಹುಲಿಗಳು ಕಂಡುಬರುತ್ತವೆ. ಈ ಹಿನ್ನಲೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.
ಹುಲಿ ಸಂರಕ್ಷಣೆ ಮತ್ತು ಸಾರ್ವಜನಿಕರಲ್ಲಿ ಹುಲಿಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 2010ರ ಜುಲೈ 29ರಂದು ಮೊದಲ ಬಾರಿಗೆ ಅಂತರಾಷ್ಟ್ರೀಯ ಹುಲಿ ದಿನವನ್ನು ರಷ್ಯಾದ ಸೆಂಟ್ ಪೀಟರ್ ಬರ್ಗ್ನಲ್ಲಿ ಆಚರಿಸಲಾಯಿತು. ಈ ದಿನದಂದು ಹುಲಿ ಸಂರಕ್ಷಣೆ ಕುರಿತು ಚರ್ಚೆ, ಉಪನ್ಯಾಸ, ಜಾಥಾ, ವಿಚಾರ ಸಂಕಿರಣ ಹಾಗೂ ಛಾಯಚಿತ್ರ ಪ್ರದರ್ಶನ ಮೂಲಕ ಹುಲಿ ಭೇಟೆ, ಹುಲಿಗಳ ರಕ್ಷಣೆಯ ಕುರಿತಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಇಂದಿನ ದಿನಗಳಲ್ಲಿ ಹುಲಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಮತ್ತು ಹುಲಿ ಸಂರಕ್ಷಣೆಯನ್ನು ಉತ್ತೇಜಿಸುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದೆ.
ಮಾನವನ ವಿಪರೀತ ಚಟುವಟಿಕೆಗಳು ಸಸ್ಯ ಸಂಪತ್ತು ಹಾಗೂ ಪ್ರಾಣಿ ಸಂಪತ್ತುಗಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಕಾಡುಗಳ ನಾಶದಿಂದಾಗಿ ಶೇಕಡಾ 97% ರಷ್ಟು ಹುಲಿಗಳು ಕಣ್ಮರೆಯಾಗಿವೆ. ಹೀಗಾಗಿ ಜಾಗತಿಕ ಮಟ್ಟದಲ್ಲಿ ಹುಲಿಗಳ ಸಂರಕ್ಷಣೆಗಾಗಿ ಜಾಗೃತಿ ಕಾರ್ಯಗಳನ್ನು ರೂಪಿಸುವುದು ಮತ್ತು ಹುಲಿಗಳ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಉಳಿಸಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್, ಇಂಟರ್ ನ್ಯಾಷನಲ್ ಫಂಡ್ ಫಾರ್ ಅನಿಮಲ್ ವೆಲ್ಫೇರ್ ಸೇರಿದಂತೆ ಅನೇಕ ಅಂತರಾಷ್ಟ್ರೀಯ ಸಂಸ್ಥೆಗಳು ವಿಶ್ವ ಹುಲಿ ದಿನವನ್ನು ಆಚರಿಸುತ್ತಿವೆ
ಹುಲಿ ಗಣತಿಯನ್ನು ನಾಲ್ಕು ವಿಧಾನದಲ್ಲಿ ನಡೆಸಲಾಗುತ್ತದೆ. ಮೊದಲ ಎರಡು ಹಂತದಲ್ಲಿ ಹುಲಿ ಇರುವಿಕೆಯ ಚಿಹ್ನೆ, ಸ್ಕ್ಯಾಟ್ ಮತ್ತು ಪಗ್ ಮಾರ್ಕ್ ಮೂಲಕ ಗುರುತಿಸಲಾಗುತ್ತದೆ. ಮೂರನೇ ಹಂತದಲ್ಲಿ ಜಿಐಎಸ್ ಅಪ್ಲಿಕೇಶನ್ನೊಂದಿಗೆ ಸಿದ್ಧಪಡಿಸಿದ ಕ್ಯಾಮೆರಾ ಟ್ರ್ಯಾಪ್ಗಳನ್ನು ಬಳಸಿ ಎಣಿಸಲಾಗುತ್ತದೆ. ಕೊನೆ ಹಂತದಲ್ಲಿ ಕ್ಯಾಮೆರಾ ಹಾಕದ ಪ್ರದೇಶದಲ್ಲಿ ಸರ್ವೇ ಕಾರ್ಯ ನಡೆಸಿ ದತ್ತಾಂಶ ಕಲೆ ಹಾಕಲಾಗುತ್ತದೆ.
ವರದಿಗಾರರು ರಂಗನಾಥ್ ಭಂಡಾರಿ ರಾಯಚೂರು…..