ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಪ್ರವಾಹ ಪೀಡಿತ ಅಥಣಿ ತಾಲೂಕಿನ ಕಾಳಜಿ ಕೇಂದ್ರಗಳಿಗೆ ತೆರಳಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರವಾಹ ಸಂತ್ರಸ್ಥರ ಅಹವಾಲುಗಳನ್ನು ಆಲಿಸಿ ಅಗತ್ಯ ವಸ್ತುಗಳ ವಿತರಣೆ ಮಾಡಿದರು.ಈ ವೇಳೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಮಹಾರಾಷ್ಟ್ರದಲ್ಲಿ ಸದ್ಯದ ಮಟ್ಟಿಗೆ ಮಳೆಯ ಪ್ರಮಾಣ ಇಳಿಮುಖವಾಗಿದ್ದು ಸಾಂಗ್ಲಿಯ ಕೃಷ್ಣಾ ನದಿ ಹರಿವಿನಲ್ಲಿ ಆರು ಇಂಚುಗಳಷ್ಟು ಇಳಿಮುಖವಾಗಿದೆ.
ಮುಂಬರುವ ಎರಡು ದಿನಗಳಲ್ಲಿ ಅಥಣಿ ತಾಲೂಕಿನಲ್ಲಿ ನದಿ ಹರಿವಿನ ಪ್ರಮಾಣ ಇಳಿಮುಖವಾಗುವ ಸಾಧ್ಯತೆ ಇದೆ ಆದ್ದರಿಂದ ಪ್ರವಾಹ ಪೀಡಿತ ಸಂತ್ರಸ್ಥರು ಭಯ ಪಡಬಾರದು ನದಿ ತೀರಸ ಪ್ರತಿ ಗ್ರಾಮಗಳಲ್ಲಿಯೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಥಣಿ ತಾಲೂಕಿನ ಪ್ರವಾಪೀಡಿತ ಗ್ರಾಮಗಳಿಂದ ಸಂತ್ರಸ್ಥರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ನೆರೆ ಪೀಡಿತ ಸಂತ್ರಸ್ತರ ನೆರವಿಗೆ ಸರ್ಕಾರ ಬದ್ಧವಾಗಿದೆ ಎಂದರು