ದಕ್ಷಿಣ ಅಮೆರಿಕದ ಈಕ್ವೆಡಾರ್ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭೂಕಂಪದ ತೀವ್ರತೆಯಿಂದಾಗಿ ಹಲವು ಕಟ್ಟಡಗಳು ಹಾನಿಗೀಡಾಗಿವೆ, ಜನರು ಮನೆ ಬಿಟ್ಟು ಬೀದಿಗೆ ಬಂದಿದ್ದು, ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದೆ.
ದೇಶದ ಕರಾವಳಿ ಗುವಾಯಾಸ್ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಕ್ವೆಡಾರ್ನ ಎರಡನೇ ದೊಡ್ಡ ನಗರವಾದ ಗುವಾಕ್ವಿಲ್ನ ದಕ್ಷಿಣಕ್ಕೆ ಸುಮಾರು 50 ಮೈಲಿಗಳ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.
ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದ್ದು, ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಎಲ್ ಒರೊದಲ್ಲಿ 11 ಮಂದಿ ಮೃತಪಟ್ಟರೆ, ಅಜುವಾಯ್ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, ಅಜುವಾಯ್ನಲ್ಲಿ ಕಾರಿನ ಮೇಲೆ ಗೋಡೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ, ಭದ್ರತಾ ಕ್ಯಾಮರಾ ಟವರ್ ಬಿದ್ದು ಎಲ್ ಒರೊದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.