ಚಿಕ್ಕೋಡಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ ಪ್ಲಾನ್ ಸಿದ್ದವಾಗಿದೆ, ವಿಜಯೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯಲ್ಲಿ ರೂಟ್ ಮ್ಯಾಪ್ ರೆಡಿಮಾಡಲಾಯ್ತು. 7 ದಿನಗಳ ಕಾಲ ನಡೆಯೋ ಯಾತ್ರೆ ಪ್ರತಿ ನಿತ್ಯ 20 ಕಿಲೋಮೀಟರ್ ಸಾಗಲಿದೆ.
ರಾಜ್ಯಾದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಜನರನ್ನ ಕರೆತರಲು ಪ್ಲಾನ್ ರೂಪಿಸಲಾಗಿದೆ. ಇದರ ಬೆನ್ನಲ್ಲೇ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ ವೈ ವಿಜಯೇಂದ್ರ ಮಾಡುತ್ತಿರುವ ಹೋರಾಟ ಅನ್ನೋದು ಬಹಿರಂಗ ಪಡಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇಳಿಸಲು ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ. ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ಇವತ್ತು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಸನಗೌಡಾ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.