ಬೆಂಗಳೂರು:- ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಅಂತ ಶಿಕ್ಷಣ ಇಲಾಖೆ ವಿಶೇಷ ಸೌಲಭ್ಯ ನೀಡಿದ್ದು, ಅದರ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು ಎಂದರು.
ನೀಡಲಾಗಿದೆ. ರೆಗ್ಯುಲರ್ ವಿದ್ಯಾರ್ಥಿಗೆ ಸಿಗುವ ಎಲ್ಲ ಅನೂಕೂಲ ಈ ವಿದ್ಯಾರ್ಥಿಗಳಿಗೆ ಸಿಗುತ್ತೆ ಎಂದು ಹೇಳಿದರು.
ನನ್ನ ಇಲಾಖೆ ಅಡಿಯಲ್ಲಿ 46 ಸಾವಿರ ಶಾಲೆಗಳು ಹಾಗೂ ಕಾಲೇಜು ಬರುತ್ತವೆ. ಇದರಲ್ಲಿ 15 ಸಾವಿರ ಅನುದಾನಿತ ಶಾಲೆಗಳಿವೆ. 42 ಸಾವಿರ ಅತಿಥಿ ಶಿಕ್ಷಕರು ನೇಮಕ ಮಾಡಿದ್ದೇವೆ. 13,500 ಸಾವಿರ ಖಾಯಂ ಶಿಕ್ಷಕರ ನೇಮಕ ಮಾಡಿದ್ದೇವೆ. 11,400 ಸಾವಿರ ಜನರಿಗೆ ಖಾಯಂ ನೇಮಾತಿಯಾಗಿದೆ. 53 ಸಾವಿರ ಖಾಯಂ ಶಿಕ್ಷಕರ ನೇಮಕಾತಿಯಾಗಬೇಕಿದೆ. ಕಳೆದ 9 ವರ್ಷಗಳಲ್ಲಿ ಅನುದಾನಿತ ಶಾಲೆಗೆ ಒಬ್ಬ ಶಿಕ್ಷರನ್ನು ನೇಮಕ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಅನುದಾನಿತ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಆಗಲಿದೆ ಎಂದು ತಿಳಿಸಿದರು.
ಅನುದಾನಿತ ಶಾಲೆಯ ಎಲ್ಲ ಹುದ್ದೆಗಳಿಗೂ ಮುಂದಿನ ಐದು ವರ್ಷಗಳಲ್ಲಿ ಖಾಯಂ ಶಿಕ್ಷಕರ ನೇಮಕಾತಿ ಆಗಲಿದೆ. ಅನುದಾನಿತ ಕನ್ನಡ ಮಾಧ್ಯಮ ಶಾಲೆ ಉಳಿಸಬೇಕಾಗಿದೆ. ಒಳ್ಳೆಯ ಶಿಕ್ಷಕರು ಇರುವುದು ಕನ್ನಡ ಮಾಧ್ಯಮ ಶಾಲೆಗಳಲ್ಲಿ. 8, 9, 10ನೇ ತರಗತಿ ಮಕ್ಕಳಿಗೆ ಮರು ಸಿಂಚನ (ವಿಶೇಷ ವಿಜ್ಞಾನ) ತರಗತಿ ಮಾಡಲಾಗುತ್ತಿದೆ. ಒಟ್ಟು 8 ಲಕ್ಷ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುತ್ತಿದ್ದರೆ.
12.50 ಕೋಟಿ ರೂ. ಅನುದಾನದಲ್ಲಿ 25 ಲಕ್ಷ ಮಕ್ಕಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಬಡ ಮಕ್ಕಳ ಎಂಜನೀಯರಿಂಗ್ ಹಾಗೂ ವೈದ್ಯಕೀಯ ಕನಸ್ಸು ನನಸು ಮಾಡುವ ಉದ್ದೇಶವಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ. ಸಿಇಟಿ ತರಬೇತಿ ಕೂಡ ನೀಲಾಗುತ್ತದೆ ಎಂದರು.
ಅಂಗನವಾಡಿಯಲ್ಲೇ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.