ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.