ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ವನಿತಾ ವಿಜಯ್ಕುಮಾರ್ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ಸದಾ ಸುದ್ದಿಯಾಗುತ್ತಿರುತ್ತಾರೆ. ಈಗಾಗಲೇ 3 ಬಾರಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿರುವ ನಟಿ ಇದೀಗ 4ನೇ ಬಾರಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಈಕೆಯ ನಡೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ.
ಕಲಾ ಕುಟುಂಬದಲ್ಲಿ ಹುಟ್ಟಿ ಬೆಳೆದ ವನಿತಾ ವಿಜಯ್ಕುಮಾರ್ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿರೋದಕ್ಕಿಂತ ವಿವಾದಗಳ ಮೂಲಕ ಸದ್ದು ಮಾಡಿದ್ದೇ ಹೆಚ್ಚು. ನಟಿ ಇದೀಗ 4ನೇ ಬಾರಿ ವೈವಾಹಿಕ ಬದುಕಿಗೆ ಕಾಲಿಡಲು ರೆಡಿಯಾಗಿದ್ದಾರೆ ಎನ್ನಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ನಟಿ ರಿಯಾಕ್ಟ್ ಮಾಡಿದ್ದಾರೆ. ಮದುವೆ ಬಗ್ಗೆ ಅಭಿಮಾನಿಯೊಬ್ಬ ಕೇಳಲಾದ ಪ್ರಶ್ನೆಗೆ ‘ಒಂದು ಅನಿರೀಕ್ಷಿತ ತಿರುವಿಗಾಗಿ ಕಾಯಿರಿ’ ಎಂದು ವನಿತಾ ಉತ್ತರಿಸಿದ್ದಾರೆ. ಇದು ಮದುವೆ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಹಾಗಾದ್ರೆ ನಟಿ ಸದ್ಯದಲ್ಲೇ ಗುಡ್ ನ್ಯೂಸ್ ಕೊಡುತ್ತಾರಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
2000ರಲ್ಲಿ ಆಕಾಶ್ ಎಂಬುವವರ ಜೊತೆಗೆ ದಾಂಪತ್ಯ ಬದುಕಿಗೆ ಕಾಲಿಟ್ಟ ವನಿತಾ 2005ರಲ್ಲಿ ಡಿವೋರ್ಸ್ ಪಡೆದು ಅವರಿಂದ ದೂರವಾದರು. ನಂತರ 2007ರಲ್ಲಿ ಉದ್ಯಮಿ ರಂಜನ್ ಆನಂದ್ ಎಂಬುವವರ ಜೊತೆಗೆ ವನಿತಾ ಎರಡನೇ ಮದುವೆಯಾದರು. ಆದರೆ 2012ರಲ್ಲಿ ಅವರೊಂದಿಗೂ ಹೊಂದಾಣಿಕೆ ಕೊರತೆಯಿಂದ ದಾಂಪತ್ಯಕ್ಕೆ ಕೊನೆ ಹಾಡಿದರು. ಬಳಿಕ 2020ರಲ್ಲಿ ಫೋಟೋಗ್ರಾಫರ್ ಪೀಟರ್ ಪೌಲ್ ಜೊತೆಗಿನ ಮದುವೆ ಕೂಡ ಮುರಿದುಬಿತ್ತು. ಇದೀಗ ನಟಿ ನಾಲ್ಕನೇ ಭಾರಿ ಹಸೆಮಣೆ ಏರಲು ಸಜ್ಜಾಗಿದ್ದಾರೆ.