ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ (Karnataka) ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ (FIR) ದಾಖಲಾಗಲಿದೆ.
ಪ್ರಕರಣ ದಾಖಲಾದ ಬಳಿಕ 2 ಸಾವಿರ ರೂ. ದಂಡ ಮತ್ತು ಗರಿಷ್ಠ 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಅಷ್ಟೇ ಅಲ್ಲದೇ ಡ್ರೈವಿಂಗ್ ಲೈಸೆನ್ಸ್ ರದ್ದಿಗೂ ಕೂಡ ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರಕ್ಕೆ (RTO) ಪೊಲೀಸರು ಪತ್ರ ಬರೆಯಲಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನ್ ಸ್ಪೀಡ್ ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇವುಗಳು ಸೆರೆ ಹಿಡಿದ ಚಿತ್ರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ.
ಯಾಕೆ ಈ ಕ್ರಮ?
ಮೈಸೂರು -ಬೆಂಗಳೂರು ಎಕ್ಸ್ಪ್ರೆಸ್ವೇಯಲ್ಲಿ (Bengaluru Mysuru Expressway) ಶೇ.90 ರಷ್ಟು ಅಪಘಾತಗಳು ಅತೀ ವೇಗದಿಂದ ಪ್ರಯಾಣದಿಂದ ಆಗುತ್ತಿತ್ತು. ನಂತರ ಎಐ ಕ್ಯಾಮೆರಾ ಅಳವಡಿಸಿದ ನಂತರ ಅಪಘಾತಗಳು ಭಾರೀ ಇಳಿಕೆಯಾಗಿತ್ತು.
ಕೆಲ ದಿನಗಳ ಹಿಂದೆಯಷ್ಟೇ ನೈಸ್ ರಸ್ತೆಯಲ್ಲಿ ಸ್ಕಾರ್ಪಿಯೋ ಕಾರೊಂದು 160 Kmph ವೇಗದಲ್ಲಿ ಚಲಾಯಿಸಿ ಅಪಘಾತ ವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹೀಗಾಗಿ ಅತಿ ವೇಗಕ್ಕೆ ಕಡಿವಾಣ ಹಾಕಲು ಈ ಕ್ರಮವನ್ನು ಜಾರಿ ಮಾಡಲಾಗಿದೆ.