ಬೆಂಗಳೂರು: ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂಗೆ ಬಿಸಿ ಮುಟ್ಟಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಆದರೆ ಈ ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೆಂಡಕಾರಿದ್ದು ಪಾದಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಯಾರೊಬ್ಬರೂ ಭಾಗಿಯಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ್ದರು.
ಆದರೆ ಇದೀಗ ಹೆಚ್ಡಿಕೆ ಜೊತೆ ಚರ್ಚೆ ನಡೆಸಿರುವ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಮನವೊಲಿಸಿದ್ದಾರೆ. ಸದ್ಯ ಒಂದೇ ಒಂದು ಷರತ್ತನ್ನು ಮುಂದೆ ಇಟ್ಟು ಪಾದಯಾತ್ರೆಗೆ ಬರುವಂತೆ ಹೆಚ್ಡಿಕೆಗೆ ಮನವೊಲಿಸಿದ್ದಾರೆ.
ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆ ಕರೆಯುತ್ತೀರಾ? ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಕಿಡಿಕಾರಿದ್ದರು. ಬಳಿಕ ಬಿಜೆಪಿ ಪಾದಯಾತ್ರೆಯಲ್ಲಿ ಜೆಡಿಎಸ್ನ ಯಾವ ಸದಸ್ಯರೂ ಹೋಗದಂತೆ ಜೆ.ಟಿ ದೇವೇಗೌಡರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ಹೆಚ್ಡಿ ಕುಮಾರಸ್ವಾಮಿ ಅವರ ಮನವೊಲಿಸಲು ಪ್ರಯತ್ನಿಸಿದ್ದು ಈ ವೇಳೆ ಹೆಚ್ಡಿಕೆ ಒಂದು ಷರತ್ತು ಇಟ್ಟಿದ್ದಾರೆ. ಪ್ರೀತಂಗೌಡ ಪಾದಯಾತ್ರೆಯಲ್ಲಿ ಇರಬಾರದು. ಹಾಗಿದ್ದಾಗ ಮಾತ್ರ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗುತ್ತೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೆ ಹೆಚ್ಡಿಕೆ ಷರತ್ತು ಹಾಕಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.
ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಬೆಂಬಲ ಕೊಡಬೇಕು? ಪ್ರೀತಂಗೌಡ ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ ಅನ್ನೋದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಆತ. ಅಂತವರ ಜೊತೆಗೆ ವೇದಿಕೆ ಮೇಲೆ ಕೂರಲು ಸಾಧ್ಯವಿಲ್ಲ ಎಂದು