ದೆಹಲಿ:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೊಟೀಸ್ಗೆ ಸಿಎಂ ಸಿದ್ದರಾಮಯ್ಯ ಭಯಗೊಂಡಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಇದೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಯಡಿಯೂರಪ್ಪಗೆ ನೊಟೀಸ್ ಕೊಡಿಸಿತ್ತು.
ಆದ್ದರಿಂದ ಅವರು ಸಾಕಷ್ಟು ಅನುಭವಿಸಿದ್ದರು ಎಂದು ಹೇಳಿದ್ದಾರೆ.
ಇಂದು ಸಂಪುಟ ಸಭೆಯಲ್ಲಿ ಗವರ್ನರ್ ವಿರುದ್ಧ ನಿರ್ಣಯ ತೆಗೆದುಕೊಂಡಿದ್ದಾರೆ. ಕಾನೂನಿನ ವಿರುದ್ಧ, ಸಂವಿಧಾನದ ವಿರುದ್ದ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನೀವು ತಪ್ಪು ಮಾಡಿಲ್ಲ ಅಂದರೆ ಯಾಕೆ ಹೆದರುತ್ತಿದ್ದೀರಿ. ನೀವು ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ನಿರಪರಾಧಿ ಎಂದಾದರೆ ಮತ್ತೆ ಅಧಿಕಾರಕ್ಕೆ ಹಿಡಿಯಿರಿ. ಆದರೆ ರಾಜ್ಯಪಾಲರ ನೊಟೀಸ್ಗೆ ನೀವು ಉತ್ತರಿಸಬೇಕು. ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಬೇಕು. ರಾಜ್ಯಪಾಲರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಾಗಿರುವುದಿರಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿನ್ನೆ ವರದಿ ಕೇಳಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಮುಂಚೆ ಕೂಡ ರಾಜ್ಯಪಾಲರಿಗೆ ಹಗರಣದ ವರದಿ ನೀಡಲಾಗಿತ್ತು.
ಇನ್ನು ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಜೊತೆಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.
ವಾಲ್ಮೀಕಿ, ಮುಡಾ ಹಗರಣ ಖಂಡಿಸಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆ ಮಾಡೇ ಮಾಡುತ್ತೇವೆ ಎಂದರು.